×
Ad

ಜ.23: ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Update: 2024-01-20 19:40 IST

ಮಂಗಳೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜ.23ರಂದು ದ.ಕ.ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಅಂದು ಬೆಳಗ್ಗೆ 8:15ಕ್ಕೆ ಮಂಗಳೂರು ಅಂತರಾಷ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 10ಕ್ಕೆ ಸುಳ್ಯಕ್ಕೆ ಭೇಟಿ ನೀಡಲಿ ದ್ದಾರೆ. 10:30ಕ್ಕೆ ಸುಳ್ಯದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯ/ಆಶ್ರಮ ಶಾಲೆಯ ಕಟ್ಟಡದ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಪೂ.11ಕ್ಕೆ ಸುಳ್ಯ ಕೆವಿಜಿ ಪುರಭವನದಲ್ಲಿ ಜನತಾ ದರ್ಶನ. ಅಪರಾಹ್ನ 3:15ಕ್ಕೆ ಸುಳ್ಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಂವಾದ ನಡೆಸುವರು.

ಸಂಜೆ 5:30ಕ್ಕೆ ಮಂಗಳೂರಿಗೆ ಆಗಮಿಸುವರು. 5:45ಕ್ಕೆ ನಗರದ ಕೋಡಿಯಾಲ್‌ಬೈಲ್‌ನಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ಕಟ್ಟಡದ ಶಿಲನ್ಯಾಸ ಕಾರ್ಯಕ್ರಮ, ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಶ್ವವಿದ್ಯಾನಿಲಯದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಾದೇಶಿಕ ಪಶು ರೋಗ ತಪಾಸಣಾ ಪ್ರಯೋಗಾಲಯದ ನೂತನ ಕಟ್ಟಡವನ್ನು ಉದ್ಘಾಟಿಸುವರು.

ರಾತ್ರಿ 7ಕ್ಕೆ ಮೂಡುಬಿದಿರೆಯ ಅರ್ಜುನಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾತ್ರಿ 11:20ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News