ಜೂ.23: ಮತೀಯ ದ್ವೇಷದ ಕೊಲೆಗಳ ಸಮಗ್ರ ತನಿಖೆಗೆ ಒತ್ತಾಯಿಸಿ ಸಿಪಿಎಂ ಪ್ರತಿಭಟನೆ
Update: 2025-06-19 18:55 IST
ಮಂಗಳೂರು, ಜೂ.19: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕೋಮುವಾದಿ ಚಟುವಟಿಕೆಗಳ ನಿಗ್ರಹಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಿ ಮತ್ತು ದ.ಕ. ಜಿಲ್ಲೆಯಲ್ಲಿ ನಡೆದಿರುವ ಮತೀಯ ದ್ವೇಷದ ಕೊಲೆ, ಪ್ರತೀಕಾರದ ಕೊಲೆಗಳನ್ನು ವಿಶೇಷ ತನಿಖಾ ತಂಡದ ಮೂಲಕ ಮರು ತನಿಖೆ ನಡೆಸು ವಂತೆ ಆಗ್ರಹಿಸಿ ಸಿಪಿಎಂ ದ.ಕ. ಜಿಲ್ಲಾ ಸಮಿತಿಯು ಜೂ.23ರಂದು ಸಂಜೆ 4:30ಕ್ಕೆ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಲಿದೆ.
ಪ್ರತಿಭಟನೆಯಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಡಾ.ಕೆ. ಪ್ರಕಾಶ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಸಿಪಿಎಂ ದ.ಕ. ಜಿಲ್ಲಾ ಸಮಿತಿಯ ಪ್ರಕಟನೆ ತಿಳಿಸಿದೆ.