×
Ad

ಜ.24ರಂದು ಸಾರ್ವಜನಿಕ ಕುರ್ ಆನ್ ಪ್ರವಚನ ಕಾರ್ಯಕ್ರಮ

Update: 2025-01-23 20:41 IST

ಉಳ್ಳಾಲ :ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ಇದರ ಆಶ್ರಯದಲ್ಲಿ ಕನ್ನಡ ದಲ್ಲಿ ಕುರ್ ಆನ್ ಸಂದೇಶ ಎಂಬ ಶೀರ್ಷಿಕೆ ಯಡಿಯಲ್ಲಿ ಸಾರ್ವಜನಿಕ ಕುರ್ ಆನ್ ಪ್ರವಚನ ಕಾರ್ಯಕ್ರಮವು ಜ.24 ಶುಕ್ರವಾರ ಸಂಜೆ ಏಳು ಗಂಟೆಗೆ ದೇರಳಕಟ್ಟೆ ಸಿಟಿ ಗ್ರೌಂಡ್ ನಲ್ಲಿ ನಡೆಯಲಿದೆ ಎಂದು ಉಳ್ಳಾಲ ಸ್ಥಾನೀಯ ಕಾರ್ಯದರ್ಶಿ ಮುಹಮ್ಮದ್ ಮುಬೀನ್ ತಿಳಿಸಿದ್ದಾರೆ.

ಅವರು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಮೋಹನ್ ದಾಸ್ ಪರಮಹಂಸ ಸ್ವಾಮೀಜಿ ಯವರ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಸ್ಜುದುಲ್ ಹುದಾ ಖತೀಬ್ ಮುಹಮ್ಮದ್ ಕುಂಞಿ ಅವರು ಕನ್ನಡದಲ್ಲಿ ಕುರ್‌ಆ ಸಂದೇಶವನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಆಲೈನ್ ಡಿಸೋಜ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಸಾದ್ ರೈ ಕಲಿಮಾರ್, ಡಾ. ಅಬ್ದುಲ್ ಶಕೀಲ್ , ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಸೈಯ್ಯದ್ ಅಲಿ, ನಿವೃತ್ತ ಶಿಕ್ಷಕ ರವೀಂದ್ರ ರೈ ಹರೇಕಳ, ಪಿ.ಎಮ್. ಅಬ್ಬಾಸ್ ಹಾಜಿ, ಮುಹಮ್ಮದ್ ಯಾಸೀನ್ ಡಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಜಮಾಅತೆ ಇಸ್ಲಾಮಿ ಹಿಂದ್ ಸ್ಥಾನೀಯ ಅಧ್ಯಕ್ಷ ಅಬ್ದುಲ್ ಕರೀಂ, ಸದಸ್ಯ ಅಬ್ದುಲ್ ರಹೀಂ, ಸಂಚಾಲಕ ಇಸ್ಹಾಕ್ ಹಸನ್, ನಿಜಾಮುದ್ದೀನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News