×
Ad

ಅ.25: ಉಳ್ಳಾಲದಲ್ಲಿ ಸೀರತ್ ಸಮಾವೇಶ

Update: 2024-10-24 20:23 IST

ಮಂಗಳೂರು, ಅ.24: ಯುನಿವೆಫ್ ಕರ್ನಾಟಕವು ಸೆಪ್ಟೆಂಬರ್ 20ರಿಂದ ಡಿಸೆಂಬರ್ 20ರವರೆಗೆ ಮಾನವ ಸ್ವಾತಂತ್ರ್ಯ, ಕಲ್ಯಾಣ ಮತ್ತು ಪ್ರವಾದಿ ಮುಹಮ್ಮದ್ (ಸ) ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಅಂಗವಾಗಿ ಅ.25ರಂದು ಸಂಜೆ 7ಕ್ಕೆ ಉಳ್ಳಾಲ ನಗರಸಭೆ ಮೈದಾನದಲ್ಲಿ ಸೀರತ್ ಸಮಾವೇಶ ನಡೆಯಲಿದೆ.

ಕಾರ್ಯಕ್ರಮದಲ್ಲಿ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಕುಟುಂಬ ಸಂಬಂಧ, ಪರಲೋಕ ಜೀವನ ಮತ್ತು ಪ್ರವಾದಿ ಮುಹಮ್ಮದ್ (ಸ) ಎಂಬ ವಿಷಯದಲ್ಲಿ ಮುಖ್ಯ ಭಾಷಣ ಮಾಡಲಿರುವರು. ಉದ್ಯಮಿ ಯು.ಕೆ.ಸಿದ್ದೀಕ್ ಅತಿಥಿಯಾಗಿ ಭಾಗವಹಿಸಲಿರುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News