×
Ad

ಅ.26ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ

Update: 2025-10-23 20:52 IST

ಮಂಗಳೂರು,ಅ.23: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿಯಲ್ಲಿ ಅ.26ರವರೆಗೆ ಹಿಂಗಾರು ಮಳೆಯು ಸುರಿಯುವುದರೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಈ ವೇಳೆ ಅರಬ್ಬಿ ಸಮುದ್ರವು ಪ್ರಕ್ಷುಬ್ದವಾಗಲಿದೆ. ಹಾಗಾಗಿ ಮುಂದಿನ ಅಪಾಯ, ಅನಾಹುತವನ್ನು ತಡೆಯುವ ಸಲುವಾಗಿ ನಾಡ ದೋಣಿ ಮೀನುಗಾರರ ಸಹಿತ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News