ಫೆ.26-27: ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ
Update: 2024-02-06 20:27 IST
ಮಂಗಳೂರು,ಫೆ.6: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವು ಫೆ.26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಈ ಉದ್ಯೋಗ ಮೇಳಕ್ಕೆ ರಾಜ್ಯದ ಎಲ್ಲಾ ವಲಯಗಳಿಂದಲೂ 500ಕ್ಕೂ ಹೆಚ್ಚಿನ ಬೃಹತ್/ ಮಧ್ಯಮ/ ಸಣ್ಣ ಉದ್ಯೋಗ ದಾತರ ಸಂಸ್ಥೆಗಳು ಭಾಗವಹಿಸಲಿವೆ. ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ನಸಿರ್ಂಗ್, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತಿತರ ವಿದ್ಯಾರ್ಹತೆಯ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 99185991800ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.