ಡಿ.27ರಿಂದ ಗೃಹಲಕ್ಷ್ಮಿ ಯೋಜನೆ ಶಿಬಿರ
Update: 2023-12-22 22:27 IST
ಮಂಗಳೂರು: ಜಿಲ್ಲೆಯಲ್ಲಿ ಬ್ಯಾಂಕ್ ಖಾತೆಗಳಿಗೆ ಯಾವುದಾದರೂ ಯೋಜನೆ ಮಾಡದಿರುವುದು ಮತ್ತು ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಅದರ ಜೋಡಣೆ ಮಾಡದಿರುವುದು ಇತ್ಯಾದಿ ಕಾರಣಗಳಿಂದ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾಗಿರುವ ಸಾಧ್ಯತೆ ಇದೆ. ಹಾಗಾಗಿ ಪ್ರತಿ ಗ್ರಾಪಂ ಕಚೇರಿಯಲ್ಲಿ ಡಿ.27ರಿಂದ 29ರವರೆಗೆ ಬೆಳಗ್ಗೆ 9ರಿಂದ ಸಂಜೆ 5 ರವರೆಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಶಿಬಿರ ಆಯೋಜಿಸಲಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.