ಆ.28: ಬ್ಯಾರಿ ಸಂಶೋಧನಾ ಕ್ಷೇತ್ರಕ್ಕೆ ಕೊಡುಗೆ ನೀಡಿದ ಮಹನೀಯರ ಸ್ಮರಣೆ ಕಾರ್ಯಕ್ರಮ
ಮಂಗಳೂರು, ಆ.25: ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ಬ್ಯಾರಿ ಸಂಶೋಧನಾ ಕ್ಷೇತ್ರಕ್ಕೆ ಕೊಡುಗೆ ನೀಡಿದ ಮಹನೀಯರ ಸ್ಮರಣೆ ಕಾರ್ಯಕ್ರಮವು ಆ.28ರಂದು ಬೆಳಗ್ಗೆ 9:30ಕ್ಕೆ ನಗರದ ಮಿಲಾಗ್ರಿಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್.ಧರ್ಮ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ ಉಮರ್ ಟೀಕೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮಿಲಾಗ್ರಿಸ್ ವಿದ್ಯಾಸಂಸ್ಥೆಯ ಸಂಚಾಲಕ ಅ.ವಂ.ಫಾ. ಬೊನವೆಂಚರ್ ನಜಿರೆತ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲ ರೆ.ಡಾ. ಆಲ್ವಿನ್ ಸೆರಾವೊ ಭಾಗವಹಿಸಲಿದ್ದಾರೆ.
ಬ್ಯಾರಿ ಸಂಶೋಧನಾ ಕ್ಷೇತ್ರಕ್ಕೆ ಕೊಡುಗೆ ನೀಡಿದ ಡಾ. ಸುಶೀಲಾ ಉಪಾಧ್ಯಾಯ ಬಗ್ಗೆ ಬ್ಯಾರಿ ಅಕಾಡಮಿಯ ಮಾಜಿ ಸದಸ್ಯೆ ಆಯಿಶಾ ಎ.ಎ.ಪೆರ್ಲ, ಡಾ. ವಹಾಬ್ ದೊಡ್ಡಮನೆ ಬಗ್ಗೆ ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ಪ್ರೊ.ಬಿ.ಎಂ. ಇಚ್ಲಂಗೋಡು ಬಗ್ಗೆ ಬ್ಯಾರಿ ಅಕಾಡಮಿಯ ಮಾಜಿ ಸದಸ್ಯ ಷಂಶುದ್ದೀನ್ ಮಡಿಕೇರಿ ವಿಷಯ ಮಂಡಿಸಲಿದ್ದಾರೆ. ಸಹ ಪ್ರಾಧ್ಯಾಪಕ ಪ್ರೊ. ಹೈದರಾಲಿ ಸಮನ್ವಯಕರರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಕುಲಸಚಿವ ಕೆ. ರಾಜು ಮೊಗವೀರ, ಬ್ಯಾರಿ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾದ ಉಮರ್ ಯು.ಎಚ್., ಮುಹಮ್ಮದ್ ಸವಾದ್, ಬಿ.ಎ.ಮುಹಮ್ಮದ್ ಹನೀಫ್, ಡಾ. ಇಸ್ಮಾಯೀಲ್ ಎನ್., ಹಂಝ ಮಲಾರ್, ಖಾಲಿದ್ ತಣ್ಣೀರುಬಾವಿ, ಬಶೀರ್ ಬೈಕಂಪಾಡಿ, ಮೊಹಿದಿನ್ ಬಾದ್‌ಷಾ ಸಂಬಾರತೋಟ ಉಪಸ್ಥಿತರಿರುವರು ಎಂದು ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.