×
Ad

ಅ.29ರಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ

Update: 2024-10-28 20:10 IST

ಮಂಗಳೂರು: ದಕ್ಷಿಣಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವು ಅ. 29ರಂದು ಬೆಳಗ್ಗೆ 10 ಗಂಟೆಗೆ ನಗರದ ವೆನ್‌ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿಆಯೋಜಿಸಲಾಗಿದೆ.

ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್‌ಅವರ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಉಡುಪಿಯ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಪ್ರಾಶುಂಪಾಲ ಡಾ. ಮಮತಾ ಕೆ.ಪಿ ಅವರು ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಆಯುಷ್ ಇಲಾಖೆಯ ಪ್ರಕಟನೆತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News