ಜ.29ರಂದು ಜಾರ್ಜ್ ಫೆರ್ನಾಂಡಿಸ್ ಸ್ಮರಣಾರ್ಥ ವಾಲಿಬಾಲ್ ಪಂದ್ಯಾಟ
ಮಂಗಳೂರು: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ವತಿಯಿಂದ ದ.ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಸಹಯೋಗದಲ್ಲಿ ದಿ.ಜಾರ್ಜ್ ಫೆರ್ನಾಂಡಿಸ್ ಅವರ 6ನೇ ಪುಣ್ಯಸ್ಮರಣೆ ಅಂಗವಾಗಿ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ ಹಾಗೂ ವಿದ್ಯಾರ್ಥಿಗಳಿಗೆ ಜ್ಞಾನದೀವಿಗೆ ಪುರಸ್ಕಾರ ಪ್ರದಾನ ಕಾರ್ಯಕ್ರಮ ಜ.29ರಂದು ಬೆಳಗ್ಗೆ 9:30ಕ್ಕೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ ಭಗಿನಿ ಮಾರಿಯೊಲ ಡಿ ಸೋಜ ಬಿ.ಎಸ್.ಪಂದ್ಯಾಟ ಉದ್ಘಾಟಿಸಲಿದ್ದಾರೆ. ನಿವೃತ್ತ ಪ್ರಾಧ್ಯಾಪಕ ಡಾ. ಕೆ. ನಾರಾಯಣ ಶೆಣೈ ನುಡಿನಮನ ಸಲ್ಲಿಸಲಿದ್ದಾರೆ. ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ ಸೋಜ, ಐಎಂಎ ಮಂಗಳೂರು ಅಧ್ಯಕ್ಷೆ ಡಾ. ಜೆಸ್ಸಿ ಮರಿಯ ಡಿ ಸೋಜ, ಉದ್ಯಮಿ ಮ್ಯಾಕ್ಸಿಂ ಕ್ರಾಸ್ತಾ, ಐವನ್ ಸಿಕ್ಚೇರಾ, ವಾಲಿಬಾಲ್ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಸ್.ಸತೀಶ್ ಕುಮಾರ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭ ಸಂಸದ ಬ್ರಿಜೇಶ್ ಚೌಟ ಅಧ್ಯಕ್ಷತೆಯಲ್ಲಿ ಜರಗಲಿದ್ದು, ಮಾಜಿ ಸಚಿವ ಕೃಷ್ಣ .ಜೆ.ಪಾಲೆಮಾರ್ ಬಹುಮಾನ ವಿತರಿಸಲಿದ್ದಾರೆ.