×
Ad

ಎ.29: ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ

Update: 2025-04-12 20:00 IST

ಮಂಗಳೂರು, ಎ.12: ಕೇಂದ್ರ ಸರಕಾರದ ಇತ್ತೀಚೆಗಿನ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಎ.29ರಂದು ಅಪರಾಹ್ನ 3ಕ್ಕೆ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿ ಕೊಳ್ಳಲಾಗಿದೆ.

ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್‌ರ ನೇತೃತ್ವದಲ್ಲಿ ಶನಿವಾರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News