2nd PU Result: ಹಝ್ರತ್ ಸೈಯದ್ ಮದನಿ ಮಹಿಳಾ ಪಿಯು ಕಾಲೇಜಿಗೆ ಶೇ.100 ಫಲಿತಾಂಶ
Update: 2024-04-11 12:08 IST
ಉಳ್ಳಾಲ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಝ್ರತ್ ಸೈಯದ್ ಮದನಿ ಮಹಿಳಾ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ.
ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 31 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಪೈಕಿ ನಾಲ್ವರು ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 17 ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ, ಎಂಟು ವಿದ್ಯಾರ್ಥಿನಿಯರು ದ್ವಿತೀಯ ದರ್ಜೆಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿನಿಯರು ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಕಾಲೇಜಿನ ಪ್ರಕಟನೆ ತಿಳಿಸಿದೆ.