×
Ad

ಜು.3: ಯೇನೆಪೊಯ ವಿವಿಯಲ್ಲಿ ಯೂತ್ ರೆಡ್‌ಕ್ರಾಸ್ ಯೋಜನಾಧಿಕಾರಿಗಳಿಗೆ ಕಾರ್ಯಾಗಾರ

Update: 2025-07-01 21:43 IST

ಮಂಗಳೂರು , ಜು.1: ಯೇನೆಪೊಯ ಪರಿಗಣಿತ ವಿ.ವಿ.ಯ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಯೂತ್ ರೆಡ್‌ಕ್ರಾಸ್ ಯೋಜನಾಧಿಕಾರಿಗಳಿಗೆ ಸಾಮರ್ಥ್ಯ ವರ್ಧನೆ ಕಾರ್ಯಾಗಾರ ಜು.3 ಮತ್ತು 4ರಂದು ದೇರಳಕಟ್ಟೆಯ ಯೇನೆಪೊಯ ಮೆಡಿಕಲ್ ಕಾಲೇಜ್ ಹಾಸ್ಪಿಟಲ್ ಸಭಾಂಗಣದಲ್ಲಿ ನಡೆಯಲಿದೆ.

ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ನಿರ್ದೇಶಕ ಪಿ.ಬಿ.ಹರೀಶ್ ರೈ, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಯೂತ್ ರೆಡ್‌ಕ್ರಾಸ್ ನಿರ್ದೇಶಕ ಸಚೇತ್ ಸುವರ್ಣ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಯೇನೆಪೊಯ ಪರಿಗಣಿತ ವಿ.ವಿ.ಯ ಕುಲಪತಿ ಡಾ.ಎಂ.ವಿಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಯೂತ್ ರೆಡ್‌ಕ್ರಾಸ್ ಘಟಕದ ನೋಡಲ್ ಅಧಿಕಾರಿ ನಿತ್ಯಶ್ರೀ .ಬಿ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News