ಅ.3: ಕಲ್ಲಡ್ಕ ಮ್ಯೂಸಿಯಂನಲ್ಲಿ ಬ್ಯಾರಿ ಭಾಷಾ ದಿನಾಚರಣೆ
ಮಂಗಳೂರು, ಅ.1: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಕಲ್ಲಡ್ಕ ಮುರಬೈಲ್ ಯೂನಿಯನ್‌ನ ಸಹಯೋಗದೊಂದಿಗೆ ಅ.3ರಂದು ಬ್ಯಾರಿ ಭಾಷಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಧ್ಯಾಹ್ನ 2:30ರಿಂದ ಸಾರ್ವಜನಿಕರಿಗೆ ಮ್ಯೂಸಿಯಂ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 4ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.
ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆ ವಹಿಸಲಿದ್ದಾರೆ. ಬಂಟ್ವಾಳ ಬ್ಯಾರಿ ಫೌಂಡೇಶನ್ ಅಧ್ಯಕ್ಷ ಪಿ.ಎ. ರಹೀಮ್, ಬಂಟ್ವಾಳ ತಾಲೂಕು ಸಂಯುಕ್ತ ಜಮಾತ್ ಅಧ್ಯಕ್ಷ ಮುಹಮ್ಮದ್ ಹನೀಫ್ ಗೋಳ್ತಮಜಲು, ಬಂಟ್ವಾಳ ತಾಲೂಕು ಜಮೀಯತುಲ್ ಫಲಾಹ್ ಅಧ್ಯಕ್ಷ ಅಬ್ಬಾಸ್ ಅಲಿ ಬಿ.ಎಂ., ಕಲ್ಲಡ್ಕ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ಲ ಹಾಜಿ ಕೋಡಿ, ಎಂ. ಫ್ರೆಂಡ್ಸ್ ಚಾರಿಟೆಬಲ್ ಟ್ರಸ್ಟ್‌ನ ಸ್ಥಾಪಕ ರಶೀದ್ ವಿಟ್ಲ, ದ.ಕ. ಜಿಲ್ಲಾ ಸಮನ್ವಯ ಶಿಕ್ಷಕರ ಸಂಘದ ಅಧ್ಯಕ್ಷ ಅಕ್ಬರ್ ಅಲಿ, ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಅಹ್ಮದ್, ಕಲ್ಲಡ್ಕ ಮುರಬೈಲ್ ಯೂನಿಯನ್‌ನ ಅಧ್ಯಕ್ಷ ಹಬೀಬ್ ಡೈಲಿ ಫ್ರೆಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಕಾಡಮಿಯ ರಿಜಿಸ್ಟ್ರಾರ್ ರಾಜೇಶ್ ಜಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.