ಎ.30: ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

Update: 2024-04-27 13:06 GMT

ಮಂಗಳೂರು: ಪ್ರೆಸ್ ಕ್ಲಬ್ ವತಿಯಿಂದ ಎ.30ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಅಧ್ಯಕ್ಷ , ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.

ಹಿರಿಯ ಪತ್ರಕರ್ತ ಯು.ಕೆ.ಕುಮಾರನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News