×
Ad

ಡಿ.30: ಎಂ ಫ್ರೆಂಡ್ಸ್ ಕಾರುಣ್ಯ ಯೋಜನೆ 7ನೇ ವಾರ್ಷಿಕೋತ್ಸವ

Update: 2024-12-28 21:53 IST

ಮಂಗಳೂರು, ಡಿ.28: ಮಂಗಳೂರಿನ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ನೀಡುವ ಕಾರುಣ್ಯ ಯೋಜನೆಯ ಏಳನೇ ವಾರ್ಷಿಕೋತ್ಸವ ಮತ್ತು ಪುತ್ತೂರಿನಲ್ಲಿ ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಕಂಪ್ಯೂಟರ್ ಶಿಕ್ಷಣ ನೀಡುವ ಕ್ಲಾಸ್ ಆನ್ ವ್ಹೀಲ್ ಯೋಜನೆಯ ಪ್ರಥಮ ವಾರ್ಷಿಕೋತ್ಸವ ಡಿ.30ರಂದು ನಡೆಯಲಿದೆ.

ಅಂದು ಸಂಜೆ 4.45ಕ್ಕೆ ವೆನ್ಲಾಕ್ ಮಕ್ಕಳ ಆಸ್ಪತ್ರೆ ವಿಭಾಗ ಆರ್‌ಎಪಿಸಿಸಿ ಕಟ್ಟಡದ ಮೂರನೇ ಮಹಡಿಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಂಫ್ರೆಂಡ್ಸ್ ಟ್ರಸ್ಟ್ ಚೈರ್ಮ್ಯಾನ್ ಝಕರಿಯಾ ಜೋಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್ ಸಿಇಒ ಡಾ.ಆನಂದ್ ಕೆ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್., ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ.ಡಿ.ಎಸ್. ಶಿವಪ್ರಕಾಶ್, ದುಬೈಯ ಬ್ಲೂ ರೋಯಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News