ಆ.31: ಸುಭಾಶ್‌ಚಂದ್ರ ಬೋಸರ ಮೂರು ಪುಸ್ತಕಗಳ ಬಿಡುಗಡೆ
Update: 2025-08-29 19:34 IST
ಮಂಗಳೂರು,ಆ.29: ಮಂಗಳೂರು ವಿವಿ ಮತ್ತು ವಿವಿ ಕಾಲೇಜು ಹಾಗೂ ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಸಹಯೋಗದಲ್ಲಿ ಪ್ರೊ.ಕೆ.ಇ.ರಾಧಾಕೃಷ್ಣ ಅನುವಾದಿಸಿದ ನೇತಾಜಿ ಸುಭಾಶ್‌ಚಂದ್ರ ಬೋಸರ ಮೂರು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವು ಆ.31ರಂದು ಮಧ್ಯಾಹ್ನ 1:30ಕ್ಕೆ ನಗರದ ಹಂಪನಕಟ್ಟೆಯಲ್ಲಿರುವ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಯಾಗಿ ಕಲ್ಕತ್ತಾದ ನೇತಾಜಿ ಸುಭಾಷ್‌ಚಂದ್ರ ಬೋಸ್ ಟ್ರಸ್ಟ್‌ನ ನಿರ್ದೇಶಕ ಪ್ರೊ. ಸುಮಂತ್ರ ಬೋಸ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.