×
Ad

343.74 ಕೋಟಿ ರೂ. ವೆಚ್ಚದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ರಸ್ತೆ ಅಭಿವೃದ್ಧಿ: ಸಂಸದ ನಳಿನ್ ಕುಮಾರ್ ಕಟೀಲ್

Update: 2024-02-05 19:33 IST

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು- ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 343.74 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್‌ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ತಮಗೆ ಪತ್ರದ ಮೂಲಕ ತಿಳಿಸಿರುವುದಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದಾರೆ.

2023-24ನೇ ಸಾಲಿನ ವಾರ್ಷಿಕ ಯೋಜನೆಯಡಿಯಲ್ಲಿ ಸುಮಾರು 343.74 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾ ಗಲಿರುವ ಈ ರಸ್ತೆಯು ರಸ್ತೆ ಬಳಕೆದಾರರಿಗೆ ಉತ್ತಮ ರಸ್ತೆ ಸಂಪರ್ಕವನ್ನು ಒದಗಿಸಲಿದ್ದು, ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಅಗತ್ಯವಾದ ಬೆಂಬಲವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲೆಗೆ ಮಹತ್ವದ ಹೆದ್ದಾರಿ ಯೋಜನೆಗಳನ್ನು ನೀಡಿರುವ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿಯವರಿಗೆ ಹಾಗೂ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರಿಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರವರು ಕೃತಜ್ಞತೆ ಸಲ್ಲಿಸಿರುವುದಾಗಿ ಸಂಸದ ನಳಿನ್ ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News