ಆ.4: ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಜನ್ಮ ದಿನಾಚರಣೆ
Update: 2025-07-31 20:19 IST
ಮಂಗಳೂರು: ಅವಿಭಜಿತ ದ.ಕ.ಜಿಲ್ಲೆಯ ಸಹಕಾರ ಆಂದೋಲನದ ಮೂಲಪುರುಷ ’ಸಹಕಾರಿ ಪಿತಾಮಹ’ ದಿ. ಮೊಳಹಳ್ಳಿ ಶಿವರಾವ್‌ರ 145ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಆ.4ರಂದು ಪೂ.11ಕ್ಕೆ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆಯನ್ನು ವಹಿಸಿ ’ಕರಾವಳಿ ಸಹಕಾರಿ’ ಮಾಸಿಕವನ್ನು ಬಿಡುಗಡೆಗೊಳಿಸುವರು. ಮಂಗಳೂರು ವಿವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಉದಯ ಕುಮಾರ್ ಇರ್ವತ್ತೂರು ಅವರು ಮೊಳಹಳ್ಳಿ ಶಿವರಾವ್ ಆವರ ಸಂಸ್ಮರಣೆಯೊಂದಿಗೆ ಉಪನ್ಯಾಸ ನೀಡಲಿರುವರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನ ನೂತನ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.