×
Ad

44ನೇ ಮಾಸ್ಟರ್ಸ್‌ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್: ಭವಾನಿ ಜೋಗಿಗೆ 3 ಬೆಳ್ಳಿ, 1 ಕಂಚಿನ ಪದಕ

Update: 2024-02-29 21:43 IST

ಭವಾನಿ ಜೋಗಿ

ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪ ಪೂ ಕಾಲೇಜು, ಆರೋಗ್ಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸು ತ್ತಿರುವ ಭವಾನಿ ಜೋಗಿ ಇತ್ತೀಚೆಗೆ ಮಹಾರಾಷ್ಟ್ರದ ಪೂನಾದಲ್ಲಿ ನಡೆದ 44ನೇ ಮಾಸ್ಟರ್ಸ್‌ ಅತ್ಲೆಟಿಕ್ಸ್ ಚಾಂಪಿಯನ್‌ ಶಿಪ್‌ನಲ್ಲಿ ಶಾಟ್ ಪುಟ್, ಜಾವಲಿನ್, 4x100ಮೀ ರಿಲೆಯಲ್ಲಿ ಬೆಳ್ಳಿ ಮತ್ತು ಡಿಸ್ಕಸ್‌ ಎಸೆತದಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ಇದರೊಂದಿಗೆ ಭವಾನಿ 2024ರ ಆಗಸ್ಟ್ ತಿಂಗಳಿನಲ್ಲಿ ಸ್ವಿಡನ್ ದೇಶದಲ್ಲಿ ನಡೆಯಲಿರುವ ವಿಶ್ವ ಮಾಸ್ಟರ್ಸ್‌ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಅಯ್ಕೆಯಾಗಿದ್ದಾರೆ.

ಈ ಸಂದರ್ಭ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಕಾಲೇಜಿನಪ್ರಾಂಶುಪಾಲ ವೆಂಕಟೇಶ್ ಮೂರ್ತಿ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News