ಫೆ.5: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
Update: 2025-02-03 23:21 IST
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆ.5 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಫೆ.5ರಂದು ಬೆಳಗ್ಗೆ 7:10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ, 7:45ಕ್ಕೆ ಸರ್ಕ್ಯೂಟ್ ಹೌಸ್‌ಗೆ ಆಗಮಿಸುವರು. 8:45ಕ್ಕೆ ಮಂಗಳೂರು ಅಡ್ಡೂರು ಸೇತುವೆ ಕಾಮಗಾರಿ ವೀಕ್ಷಣೆ, 10ಕ್ಕೆ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಮತ್ತು ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಪರಾಹ್ನ 3ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಮೃತ ನಗರೋತ್ಥಾನ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆ, ಸಂಜೆ 4:30ಕ್ಕೆ ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಂಗಮಂದಿರ ನಿರ್ಮಾಣದ ಕುರಿತು ಸಭೆಯಲ್ಲಿ ಭಾಗವಹಿಸುವರು. ಸಂಜೆ 6:40ಕ್ಕೆ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದ್ದಾರೆ.