×
Ad

ಎ.7: ಬಿಎಸ್‌ಡಬ್ಲ್ಯುಟಿ ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನೆ

Update: 2025-04-06 21:56 IST

ಮಂಗಳೂರು, ಎ.6: ಭಾರತ್ ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಮತ್ತು ನರಿಂಗಾನ ಗ್ರಾಮ ಪಂಚಾಯತ್ ಸಹಯೋಗದಲ್ಲಿ ದಶಮಾನೋತ್ಸವದ ಪ್ರಯುಕ್ತ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ

ಎ.7ರಂದು ಬೆಳಗ್ಗೆ 9 ಗಂಟೆಗೆ ನರಿಂಗಾನ ಗ್ರಾಮ ಪಂಚಾಯಿತ್ ಸಭಾಂಗಣದಲ್ಲಿ ನೆರವೇರಲಿದೆ.

ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿರುವರು. ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜನಾಡಿ ಇಲ್ಲಿನ ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ಭಟ್ ಹಾಗೂ ಸಂತ ಲಾರೆನ್ಸ್ ದೇವಾಲಯ ಬೋಳ ನರಿಂಗಾನ ಇಲ್ಲಿನ ಧರ್ಮ ಗುರುಗಳಾದ ಫಾ.ರೆ ಫೆಡ್ರಿಕ್ ಕೊರೆಯ ಆಶೀರ್ವಚನ ನೀಡಲಿದ್ದಾರೆ.

ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್‌ನ ಅಧ್ಯಕ್ಷ ಎನ್ ಅಮೀನ್ ಪಕ್ಕಲಡ್ಕ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News