×
Ad

ಜ.8-9ರಂದು ಯುವನಿಧಿ ನೋಂದಣಿ ಮೇಳ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Update: 2024-01-05 19:00 IST

ಮಂಗಳೂರು,ಜ.5: ಪದವೀಧರರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದಿರುವವರಿಗೆ 1500 ರೂ. ನಿರು ದ್ಯೋಗ ಭತ್ತೆ ನೀಡುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ನೋಂದಣಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಎಂಪಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.

ಈ ಸಂಬಂಧ ಶುಕ್ರವಾರ ತನ್ನ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ದ.ಕ. ಜಿಲ್ಲೆಯ ಎಲ್ಲಾ ಪದವಿ ಕಾಲೇಜು ಹಾಗೂ ಡಿಪ್ಲೊಮಾ ಶಿಕ್ಷಣ ಸಂಸ್ಥೆಗಳಲ್ಲಿ ಜ.8 ಮತ್ತು 9ರಂದು ನೋಂದಣಿ ಮೇಳವನ್ನು ನಡೆಸಬೇಕು. 2023ರಲ್ಲಿ ಪದವಿ, ಡಿಪ್ಲೊಮಾ ಪಡೆದವರು ಇದಕ್ಕೆ ಅರ್ಹರಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೆ ಯುವ ನಿಧಿಗೆ ನೋಂದಣಿ ಮಾಡಲು ಹೆಚ್ಚಿನ ಪ್ರತಿಕ್ರಿಯೆ ಕಂಡು ಬಂದಿದೆ. ಈ ನಿಟ್ಟಿನಲ್ಲಿ ಕಾಲೇಜುಗಳಲ್ಲಿ ನೋಂದಣಿ ಅಭಿಯಾನ ನಡೆಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ, ಮಂಗಳೂರು ವಿವಿಯ ಪ್ರಾಧ್ಯಾಪಕ ಡಾ.ಎ.ಎಂ.ಖಾನ್, ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News