ಮಾ.9: ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಉಲಮಾ ನೇತೃತ್ವದಲ್ಲಿ ಪ್ರತಿಭಟನೆ
Update: 2025-03-07 21:23 IST
ಸಾಂದರ್ಭಿಕ ಚಿತ್ರ
ಮಂಗಳೂರು, ಮಾ.7: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಉಲಮಾ ಕೋಆರ್ಡಿನೇಶನ್ ಕರ್ನಾಟಕ ಇದರ ನೇತೃತ್ವದಲ್ಲಿ ಮಾ.9ರಂದು ಬೆಳಗ್ಗೆ 10ಕ್ಕೆ ನಗರದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.
ಉಲಮಾಗಳ ನೇತೃತ್ವದಲ್ಲಿ ಹಂಪನಕಟ್ಟೆಯಿಂದ ಕ್ಲಾಕ್‌ಟವರ್‌ವರೆಗೆ ಜಾಥಾ ಹೊರಡಲಿದ್ದು, ಆ ಬಳಿಕ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.