×
Ad

ಮಾ.9: ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಉಲಮಾ ಒಕ್ಕೂಟದಿಂದ ಕಾಲ್ನಡಿಗೆ ಜಾಥಾ

Update: 2025-03-08 21:13 IST

ಮಂಗಳೂರು: ಕೇಂದ್ರ ಸರಕಾರವು ಜಾರಿಗೊಳಿಸಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಮಾ.9ರಂದು ಬೆಳಗ್ಗೆ 9:30ಕ್ಕೆ ಮಂಗಳೂರಿನಲ್ಲಿ ಕಾಲ್ನಡಿಗೆ ಜಾಥಾ ನಡೆಯಲಿದೆ.

ನಗರದ ಹಂಪನಕಟ್ಟೆಯಿಂದ ಹೊರಟ ಜಾಥಾವು ಕ್ಲಾಕ್ ಟವರ್‌ನಲ್ಲಿ ಸಮಾರೋಪಗೊಳ್ಳಲಿದೆ. ಸಯ್ಯಿದ್ ಅಮೀರ್ ತಂಳ್ ಕಿನ್ಯ ದುಆಗೈಯಲಿದ್ದು, ಖಾಝಿ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಜಾಥಾ ಉದ್ಘಾಟಿಸಲಿದ್ದಾರೆ.

ಕ್ಲಾಕ್ ಟವರ್‌ನಲ್ಲಿ ನಡೆಯುವ ಸಮಾರೋಪದಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಳ್ ಉಜಿರೆ ಅಧ್ಯಕ್ಷತೆ ವಹಿಸಲಿದ್ದು, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಉಸ್ಮಾನುಲ್ ಫೈಝಿ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಶಾಫಿ ಸಅದಿ ಪ್ರಾಸ್ತಾವಿಕ ಭಾಷಣ ಮಾಡಲಿದ್ದು, ಡಾ. ಎಮ್ಮೆಸ್ಸೆಂ ಅಬ್ದುಲ್ ರಶೀದ್ ಝೈನಿ, ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಸಂದೇಶ ಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News