×
Ad

ಫೆ.9-10: ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Update: 2024-02-07 20:14 IST

ಮಂಗಳೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆ.9 ಮತ್ತು 10ರಂದು ದ.ಕ.ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಫೆ.9ರ ಬೆಳಿಗ್ಗೆ 8:15ಕ್ಕೆ ಮಂಗಳೂರು ವಿಮಾನ ನಿಲ್ದಾಣ, 8:45ಕ್ಕೆ ಸರ್ಕ್ಯೂಟ್ ಹೌಸ್, 10ಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸುವರು. ರಾತ್ರಿ 8ಕ್ಕೆ ಉಡುಪಿಗೆ ತೆರಳುವರು.

ಫೆ.10ರ ಸಂಜೆ 5:30ಕ್ಕೆ ನಗರದ ತಣ್ಣೀರುಬಾವಿ ಬೀಚ್‌ನಲ್ಲಿ ನಡೆಯುವ ಗಾಳಿಪಟ ಉತ್ಸವದಲ್ಲಿ ಭಾಗವಹಿಸುವರು. ರಾತ್ರಿ 8:10ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News