ದ.ಕ.ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ ರಾಜ್ಯಪಾಲರ ಭೇಟಿ
Update: 2023-09-08 18:05 IST
ಮಂಗಳೂರು, ಸೆ.8: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆಯ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರನ್ನು ಶುಕ್ರವಾರ ಭೇಟಿಯಾಗಿ ಸಂಘದ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು.
ಗ್ರಾಮ ವಾಸ್ತವ್ಯ ಪರಿಕಲ್ಪನೆಗೆ ಮೆಚ್ಚುಗೆ ಸೂಚಿಸಿದ ರಾಜ್ಯಪಾಲರು, ಪತ್ರಕರ್ತರ ಸಂಘದ ಸಮಾಜಮುಖಿ ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಸ್ಪೀಕರ್ ಯು.ಟಿ.ಖಾದರ್ ಹಾಜರಿದ್ದರು.
ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಪತ್ರಿಕಾ ಭವನದ ಟ್ರಸ್ಟಿ ಸುಖಪಾಲ್ ಪೊಳಲಿ, ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ನಿಯೋಗದಲ್ಲಿದ್ದರು.