×
Ad

ಉಪ್ಪಿನಂಗಡಿಯಲ್ಲೊಂದು ಹೃದಯವಿದ್ರಾವಕ ಘಟನೆ : ರಸ್ತೆ ಬದಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಮೃತ್ಯು

Update: 2023-12-29 16:19 IST

ಉಪ್ಪಿನಂಗಡಿ: ಇಲ್ಲಿನ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಲಾರಿ ಚಾಲಕ ಲಾರಿಯಲ್ಲೇ ಮೃತಪಟ್ಟಿದ್ದು, ಎರಡು ದಿನಗಳ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.

ಮೃತ ಚಾಲಕರನ್ನು ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ಖಲೀಲ್ ಖಾನ್ (58) ಎಂದು ಗುರುತಿಸಲಾಗಿದೆ.

ಎರಡು ದಿನಗಳ ಹಿಂದೆ ಮೈಸೂರಿನಿಂದ ಬಿ.ಸಿ.ರೋಡಿಗೆ ಹಾಸಿಗೆಯ ಲೋಡನ್ನು ತಂದಿದ್ದ ಚಾಲಕ ಖಲೀಲ್, ಲೋಡ್ ಖಾಲಿ ಮಾಡಿದ ಬಳಿಕ ರಾತ್ರಿ ವೇಳೆ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದರು.

ಲಾರಿಯ ಕ್ಯಾಬಿನ್‍ ನ ಬಾಗಿಲು ಹಾಕಿದ್ದರಿಂದ ಚಾಲಕ ಲಾರಿಯೊಳಗೆ ಮೃತಪಟ್ಟಿದ್ದು, ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಡಿ.29ರಂದು ಲಾರಿಯಿಂದ ವಾಸನೆ ಬರಲಾರಂಭಿಸಿದ್ದು, ಸಂಶಯಗೊಂಡ ಸ್ಥಳೀಯರು ಪರಿಶೀಲಿಸಿದಾಗ ಲಾರಿಯ ಚಾಲಕ ಮಲಗಿದ್ದಲ್ಲೇ ಮೃತಪಟ್ಟಿರುವುದು ತಿಳಿದು ಬಂದಿದೆ.

ಹೃದಯಾಘಾತವುಂಟಾಗಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News