×
Ad

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಚೊಂಬು: ಡಾ.ಮಂಜುನಾಥ ಭಂಡಾರಿ

Update: 2026-02-01 20:50 IST

ಕೇಂದ್ರ ಸರಕಾರದ ಬಜೆಟ್ ನಿರಾಶಾದಾಯಕವಾಗಿದೆ. ಯಾವುದೇ ದೂರದೃಷ್ಟಿಯಿಲ್ಲದ ಬಜೆಟ್ ಇದು. ವಿಕಸಿತ ಭಾರತ ಎಂದು ಬರೀ ಹೇಳಿಕೆಗಳಿಂದ ಕೂಡಿದ್ದು, ದೇಶದ ಸಾಮಾನ್ಯ ಜನತೆಗೆ ಮತ್ತೊಮ್ಮೆ ನಿರಾಶೆಯನ್ನುಂಟು ಮಾಡಿದೆ ಎಂದು ಶಾಸಕರು, ಕರ್ನಾಟಕ ವಿಧಾನ ಪರಿಷತ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ.ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಮೇಕೆದಾಟು ಯೋಜನೆಗೆ ಅನುಮತಿ ಇಲ್ಲ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವಿಲ್ಲ.ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ರಾಜ್ಯಕ್ಕೆ ಕೇಂದ್ರ ಸರಕಾರ ಚೊಂಬು ನೀಡಿದೆ. ಬಜೆಟ್‌ನಲ್ಲಿ ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಇಲ್ಲ. ದೇಶದ ಮಹಿಳೆಯರು, ರೈತರು ಹಾಗೂ ಯುವಜನತೆಯ ಭವಿಷ್ಯದ ಮೇಲೆ ನೇರವಾಗಿ ಸಕಾರಾತ್ಮಕ ಪರಿಣಾಮ ಬೀರುವ ಯಾವುದೇ ಗುಣಾತ್ಮಕ ಸಂಗತಿಗಳನ್ನು ಈ ಬಜೆಟ್ ಹೊಂದಿಲ್ಲ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News