×
Ad

ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬಸ್ಸಿಗೆ ಅಡ್ಡ ಬಂದು ನಿಂತ ಕಾಡಾನೆ; ವಾಹನ ಸಂಚಾರ ಅಸ್ತವ್ಯಸ್ತ

Update: 2024-06-13 12:18 IST

ಬೆಳ್ತಂಗಡಿ;  ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಏಕಾಏಕಿ ಕಾಡಾನೆ ಬಸ್ಸಿಗೆ ಅಡ್ಡ ಬಂದು ನಿಂತ ಘಟನೆ ಬುಧವಾರ ತಡ ರಾತ್ರಿ ಸಂಭವಿಸಿದೆ. ಕಾಡಾನೆ ರಸ್ತೆಯಲ್ಲಿಯೇ ನಿಂತ ಕಾರಣ ಘಾಟಿಯಲ್ಲಿ ಸುಮಾರು ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಕಾಡಾನೆಯನ್ನು ನೋಡಿದ ಕೂಡಲೇ  ಚಾಲಕ ಬಸ್ ನಿಲ್ಲಿಸಿದ್ದಾನೆ ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ಸಿನ ಎದುರು ನಿಂತಿದ್ದ ಆನೆಯನ್ನು ಕಂಡು ಗಾಬರಿಗೊಂಡಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆಯಲ್ಲೇ ನಿಂತ ಕಾಡಾನೆ ಬಳಿಕ ಅರಣ್ಯಕ್ಕೆ ಪ್ರವೇಶ ಮಾಡಿದೆ ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಸುಮಾರು ಎರಡು ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಕಳೆದ ಎರಡು ತಿಂಗಳಿನಿಂದ ಕಾಡಾನೆಯೊಂದು ಈ ಪರಿಸರದಲ್ಲಿ ಬೀಡು ಬಿಟ್ಟಿದ್ದು ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ ಅಲ್ಲದೆ ಪಕ್ಕದ ಗ್ರಾಮಗಳಿಗೂ ದಾಳಿ ಮಾಡಿದೆ ಎಂದು ಅಲ್ಲಿನ ನಿವಾಸಿಗಳು ಹೇಳಿದ್ದಾರೆ.

ಆದಷ್ಟು ಬೇಗ ಕಾಡಾನೆಯನ್ನು ಸ್ಥಳಾಂತರಿಸುವಂತೆ ಇಲ್ಲಿನ ಸ್ಥಳೀಯರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News