×
Ad

ಸುಳ್ಯದ ಮಹಿಳೆ ಬೆಂಗಳೂರಿನಲ್ಲಿ ಆತ್ಮಹತ್ಯೆ

Update: 2023-10-27 15:53 IST

ಸುಳ್ಯ, ಅ.27: ಬೆಂಗಳೂರಿನಲ್ಲಿ ನೆಲೆಸಿರುವ ಮೂಲತಃ ಕನಕಮಜಲು ಗ್ರಾಮದ ವಿವಾಹಿತ ಯುವತಿಯೊಬ್ಬರು =ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿಯ ಪುತ್ರಿ ಐಶ್ವರ್ಯಾ(23) ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಐಶ್ವರ್ಯಾರನ್ನು ಕೆಲವು ವರ್ಷಗಳ ಹಿಂದೆ ಕನಕಮಜಲು ಗ್ರಾಮದ, ಪ್ರಸಕ್ತ ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಗಿರಿಯಪ್ಪ ಗೌಡರ ಪುತ್ರ ರಾಜೇಶ್ ವಿವಾಹವಾಗಿದ್ದರು. ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News