×
Ad

ಪಂಜಿಮೊಗರಿನ ಯುವಕ ದುಬೈಯಲ್ಲಿ ನಿಧನ

Update: 2023-10-25 22:57 IST

ಮಂಗಳೂರು : ಕೂಳೂರು ಪಂಜಿಮೊಗರು ವಿದ್ಯಾನಗರ ನಿವಾಸಿ ಅಖ್ತರ್(27) ಎಂಬವರು ದುಬೈಯ ಸಲಾವುದ್ದೀನ್ ಎಂಬಲ್ಲಿ ಹೃದಯಾಘಾತದಿಂದ ರವಿವಾರ ನಿಧರಾಗಿದ್ದಾರೆ.

ಪಂಜಿಮೊಗರು ವಿದ್ಯಾನಗರದ ಮುಹಮ್ಮದ್ ಎಂಬವರು ಪುತ್ರ ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ಕೆಲಸದಲ್ಲಿದ್ದರು. ರವಿವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅಖ್ತರ್ ಏಳದೇ ಇದ್ದಾಗ ಸಂಗಡಿಗರು ಪರಿಶೀಲಿಸಿದಾದ ಅವರು ನಿಧನರಾಗಿದ್ದರು ಎಂದು ತಿಳಿದುಬಂದಿದೆ.

ಮೃತದೇಹವನ್ನು ಊರಿಗೆ ತರುವ ನಿಟ್ಟಿನಲ್ಲಿ ಕೆಸಿಎಫ್ ಸಂಘಟನೆಯ ಪದಾಧಿಕಾರಿಗಳು, ಸೌದಿಯಲ್ಲಿರುವ ಮೃತರ ಸಹೋದರ ಇರ್ಫಾನ್ ಸ್ಥಳಕ್ಕೆ ಆಗಮಿಸಿದ್ದು ಕ್ರಮ ಕೈಗೊಂಡಿದ್ದಾರೆ.

ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News