ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಪೊಲೀಸ್ ವಶಕ್ಕೆ
Update: 2025-05-30 23:06 IST
ಅಬ್ದುಲ್ ರಹ್ಮಾನ್
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹ್ಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿಯ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27), ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23)ನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು,ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.