ಕೊಳತ್ತಮಜಲು ಮಸೀದಿಯ ಆವರಣದಲ್ಲಿ ಅಬ್ದುಲ್ ರಹ್ಮಾನ್‌ರ ಅಂತ್ಯಕ್ರಿಯೆ
Update: 2025-05-28 17:07 IST
ಮಂಗಳೂರು: ದುಷ್ಕರ್ಮಿಗಳಿಂದ ಮಂಗಳವಾರ ಹತ್ಯೆಗೀಡಾಗಿದ್ದ ಅಬ್ದುಲ್ ರಹ್ಮಾನ್ ಅವರ ದಫನ ಕ್ರಿಯೆಯು ಕುರಿಯಾಳ ಗ್ರಾಮದ ಇರಾಕೋಡಿಯ ಮಸೀದಿಯ ಆವರಣದಲ್ಲಿ ಬುಧವಾರ ನಡೆಯಿತು.
ಭಾರಿ ಸಂಖ್ಯೆಯಲ್ಲಿ ಸೇರಿದ್ದ ಜನರು ಅಂತಿಮ ದರ್ಶನ ಪಡೆದರು. ಕುತ್ತಾರ್ ಮದನಿ ನಗರದ ಮಸೀದಿಯಲ್ಲಿ ಪ್ರಾಥಮಿಕ ವಿಧಿ ವಿಧಾನ ಪೂರೈಸಿದ ಬಳಿಕ ಮೃತದೇಹವನ್ನು ಅವರ ಮನೆಗೆ ಕೊಂಡೊಯ್ಯಲಾಯಿತು. ಈ ಸಂದರ್ಭ ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿತ್ತು. ಬಳಿಕ ಅಬ್ದುಲ್ ರಹ್ಮಾನ್‌ರ ತಂದೆ, ತಾಯಿ, ಸಹೋದರಿ, ಪತ್ನಿ ಹಾಗೂ ಸಂಬಂಧಿಕರ ಸಹಿತ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.