ಮಂಗಳೂರು: ಹೆಂಚಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ
Update: 2026-01-20 15:19 IST
ಮಂಗಳೂರು, ಜ.20: ನಗರದ ಹೊಯ್ಗೆ ಬಝಾರ್ ನಲ್ಲಿರುವ ಹೆಂಚಿನ ಕಾರ್ಖಾನೆವೊಂದರಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದೆ.
ಮಂಗಳವಾರ ಮುಂಜಾನೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಅದು ಕಾರ್ಖಾನೆಯನ್ನು ಆವರಿಸಿದೆ. ಕಾರ್ಖಾನೆಯ ಆವರಣದಲ್ಲಿ ಹೆಂಚು ಸುಡಲು ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಮತ್ತು ಇತರ ದಹ್ಯ ವಸ್ತುಗಳಿದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿದೆ ಎನ್ನಲಾಗಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.