×
Ad

Mangaluru | ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪ: ಮುಂಬೈ ವಿಮಾನ ನಿಲ್ದಾಣದಲ್ಲಿ ಆರೋಪಿಯ ಬಂಧನ

Update: 2025-12-08 19:56 IST

ಸಾಂದರ್ಭಿಕ ಚಿತ್ರ

ಮಂಗಳೂರು: ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಭಾವ ಉಂಟಾಗುವ ಪೋಸ್ಟ್ ಹಾಕಿದ ಆರೋಪಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಫೆಲಿಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟಿದ್ದ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾಗ ಪೋಸ್ಟ್ ಹಾಕಿದ್ದ. ಮೂಲತಃ ಮುಂಬೈಯ ಚಾರ್ಕೋಪ್ ನಿವಾಸಿಯಾಗಿದ್ದ ಈತನ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದರು.

ಈತ ಮುಂಬೈ ಸಹರಾ ವಿಮಾನ ನಿಲ್ದಾಣಕ್ಕೆ ಬಂದಿದ್ದನ್ನು ಇಮಿಗ್ರೇಶನ್ ಅಧಿಕಾರಿಗಳು ಮಾಹಿತಿ ನೀಡಿದ್ದರು. ಅದರಂತೆ ಡಿ.5ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತನ ಪಾಸ್‌ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೋರ್ವ ಆರೋಪಿ ಎವಿಜಿನ್ ಜಾನ್ ಡಿಸೋಜ (57) ಎಂಬಾತನನ್ನು 2024ರ ಆ.11ರಂದು ಬಂಧಿಸಲಾಗಿತ್ತು ಎಂದು ಪೊಲೀಸ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News