×
Ad

ಮಾಂಸ ಸಾಗಾಟ ಮಾಡುತ್ತಿದ್ದ ಆರೋಪ: ಓರ್ವ ಸೆರೆ

Update: 2023-09-10 21:59 IST

ಮಂಗಳೂರು, ಸೆ.10: ಆಟೊ ರಿಕ್ಷಾದಲ್ಲಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುರತ್ಕಲ್‌ ಕಳವಾರು ನಿವಾಸಿ ದಾವೂದ್‌ ಎಂದು ತಿಳಿದು ಬಂದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಜೋಕಟ್ಟೆ ನಿವಾಸಿ ಬದ್ರುದ್ದೀನ್‌ ಮತ್ತು ಯಾಸೀನ್‌ ಎಂಬವರು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳ ವಿರುದ್ಧ ಅಪರಾಧ ಕ್ರಮಾಂಕ 97/2023ರಲ್ಲಿ 4, 12 ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ತಡೆ ಕಾಯ್ದೆ 2020ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಇಲಾಖೆ ಮಾಹಿತಿ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News