×
Ad

ಕಠಿಣ ಪರಿಶ್ರಮ, ಧೈರ್ಯ, ಕಾಳಜಿಯಿಂದ ಸಾಧನೆ ಸಾಧ್ಯ: ಡಾ.ನಿರಂಜನ್

Update: 2024-08-31 20:17 IST

ಉಡುಪಿ, ಆ.31: ಕಠಿಣ ಪರಿಶ್ರಮ, ಧೈರ್ಯ, ಕಾಳಜಿ ಮತ್ತು ಸಮರ್ಪಣೆ ಯಿಂದ ಜೀವನದಲ್ಲಿ ಎಲ್ಲವನ್ನೂ ಸಾಧಿಸಬ ಹುದು. ಪ್ರೀತಿ ಮತ್ತು ಪ್ರಯತ್ನವು ಶ್ರೇಷ್ಟತೆಗೆ ಕಾರಣವಾಗುತ್ತದೆ. ಲಭ್ಯತೆ, ಸಾಮರ್ಥ್ಯ, ಸ್ನೇಹಶೀಲತೆ ಮತ್ತು ಕೈಗೆಟು ಕುವಿಕೆಯು ವೃತ್ತಿಜೀವನದ ಯಶಸ್ಸಿಗೆ ಪ್ರಮುಖ ಅಂಶವಾಗಿದೆ ಎಂದು ಧಾರವಾಡ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ನಿರಂಜನ್ ಕುಮಾರ್ ಹೇಳಿದ್ದಾರೆ.

ಉಡುಪಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಭಾವ ಪ್ರಕಾಶ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ‘ವಿಶಿಖಾನು ಪ್ರವೇಶ’ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ವಹಿಸಿದ್ದರು. ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸ್ನಾತಕ ವಿದ್ಯಾರ್ಥಿ ಡಾ.ವಿನಾಯಕ ಜೋಯಿಸ್‌ರವರಿಗೆ ಅತ್ಯುತ್ತಮ ವಿದ್ಯಾರ್ಥಿ ಎಂಬ ಚಿನ್ನದ ಪದಕವನ್ನು ನೀಡಲಾಯಿತು. 76 ಸ್ನಾತಕ ಮತ್ತು 48 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮುಖ್ಯಾಧಿಕಾರಿ ಡಾ.ವೀರ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ.ಅಶೋಕ್ ಕುಮಾರ್ ಬಿ.ಎನ್. ಹಾಗೂ ಸ್ನಾತಕ ವಿಭಾಗದ ಡೀನ್ ಡಾ.ರಜನೀಶ್ ವಿ.ಗಿರಿ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಡಾ.ಶ್ರೀಲತಾ ಕಾಮತ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ.ಮಮತಾ ಕೆ.ವಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್. ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಕುಮಾರ್ ಮತ್ತು ಡಾ. ಲಿಖಿತಾ ಡಿ.ಎನ್. ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News