ಅಡ್ಡೂರು ಸೇತುವೆ ನಿರ್ಬಂಧ: ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ
Update: 2024-09-10 22:29 IST
ಮಂಗಳೂರು: ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ ರಾಜ್ಯ ಹೆದ್ದಾರಿ ಸಂಪರ್ಕಕ್ಕೆ ಕೊಂಡಿಯಾಗಿರುವ ಫಲ್ಗುಣಿ ನದಿಯ ಪೊಳಲಿ ಸೇತುವೆಯಲ್ಲಿ ಲಾರಿ ಮತ್ತು ಬಸ್ಸುಗಳಿಗೆ ಹಾಕಿರುವ ನಿರ್ಬಂಧವನ್ನು ತೆರವುಗೊಳಿಸುವ ಬಗ್ಗೆ ಪರಿಶೀಲಿಸಲು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಸೇತುವೆಯಲ್ಲಿ ನಿರ್ಬಂಧದಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿರುವ ಬಗ್ಗೆ ಅಹವಾಲುಗಳು ಬಂದ ಹಿನ್ನಲೆಯಲ್ಲಿ ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಚಂದ್ರಶೇಖರ ಭಂಡಾರಿ ಸಚಿವರಿಗೆ ಮನ ಸಲ್ಲಿಸಿದ್ದರು.
ಇದಕ್ಕೆ ಸ್ಪಂದಿಸಿರುವ ಸಚಿವರು ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಅಡ್ಡೂರು ಸೇತುವೆ ನಿರ್ಬಂಧ ತೆರವು ಬಗ್ಗೆ ಪರಿಶೀಲಿಸಿ ಶೀಘ್ರವೇ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.