×
Ad

ಬಾಲಕಿಯ ಅತ್ಯಾಚಾರ ಆರೋಪ: ಇಬ್ಬರ ಬಂಧನ

Update: 2023-08-17 22:19 IST

ಮಂಗಳೂರು, ಆ.17: ಭಿನ್ನ ಸಾಮರ್ಥ್ಯದ ಬಾಲಕಿಯ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಬಿಹಾರದ ಪ್ರಸ್ತುತ ಮುಂಬೈಯಲ್ಲಿ ವಾಸವಾಗಿರುವ ಅಬ್ದುಲ್ ಹಲೀಂ (37) ಹಾಗೂ ಕುಲಶೇಖರದ ಶಮೀರಾ ಬಾನು (22) ಬಂಧಿತ ಆರೋಪಿಗಳು.

ಬಾಲಕಿಯ ತಾಯಿ ನೀಡಿದ ದೂರಿನಂತೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯಕ್ಕೆ ಪ್ರೇರಣೆ ನೀಡಿದ ಸಂಬಂಧಿಕಳಾದ ಶಮೀನಾ ಬಾನುಳನ್ನು ತಕ್ಷಣ ಬಂಧಿಸಿದ ಪೊಲೀಸರು, ಮಂಗಳೂರಿನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಅಬ್ದುಲ್ ಹಲೀಂನನ್ನು ಗೋವಾದ ಮಡಗಾಂವ್‌ನಲ್ಲಿ ಅಲ್ಲಿನ ಪೊಲೀಸರ ಸಹಾಯದಿಂದ ಬಂಧಿಸಿ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

*ಇತ್ತೀಚೆಗೆ ಅಪ್ರಾಪ್ತರ ಹಾಗೂ ವಿಶೇಷ ಭಿನ್ನ ಸಾಮರ್ಥ್ಯದ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿ ರುವ ಹಿನ್ನೆಲೆಯಲ್ಲಿ ಹೆತ್ತವರು ಸಂಬಂಧಿಕರ ಜತೆ ಕಳುಹಿಸುವಾಗ ಅಥವಾ ನಿಲ್ಲಿಸುವಾಗ ನಿಗಾ ವಹಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News