×
Ad

ಸರಕಾರಿ ಜಮೀನು ಖಾಸಗಿ ಸಂಸ್ಥೆಗಳಿಗೆ ಮಂಜೂರು ಮಾಡಲು ಅವಕಾಶವಿಲ್ಲ: ಸಚಿವ ಕೃಷ್ಣ ಬೈರೇಗೌಡ

Update: 2023-12-14 18:25 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಒಳಗೊಂಡಂತೆ ರಾಜ್ಯದ ಯಾವುದೇ ಪ್ರದೇಶದಲ್ಲಿನ ಗೋಮಾಳ ಮತ್ತು ಖರಾಬು ಜಮೀನುಗಳು ಸೇರಿದಂತೆ ಸರ್ಕಾರಿ ಜಮೀನುಗಳನ್ನು ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 22(ಎ)(2) ರಂತೆ ನಗರ ಪೌರಮಿತಿಯೊಳಗೆ ಯಾವುದೇ ವ್ಯಕ್ತಿಗೆ ಅಥವಾ ಖಾಸಗಿ ಸಂಸ್ಥೆಗಳಿಗೆ ಮಂಜೂರು ಮಾಡಲು ಅವಕಾಶವಿರುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರ ಪೌರಮಿತಿಯೊಳಗಿನ ಸರಕಾರಿ ಜಮೀನುಗಳನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಲು ಅವಕಾಶ ಇದೆ.

ಅನಿವಾರ್ಯ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿ, ಪ್ರಾದೇಶಿಕ ಆಯುಕ್ತರ ಶಿಫಾರಸು, ಅಥವಾ ಸ್ವತಃ ಸರಕಾರವೇ ಈ ನಿಯಮ ಗಳ ಯಾವುದೇ ಉಪಬಂಧಗಳನ್ನು ಸಡಿಲಗೊಳಿಸುವುದು ನ್ಯಾಯ ಮತ್ತು ಯುಕ್ತವೆಂದು ಕಂಡು ಬಂದಲ್ಲಿ ಕರ್ನಾಟಕ ಭೂ ಮಂಜೂರಾತಿ ನಿಯಮ 1969ರ ನಿಯಮ 27ರಂತೆ ಸಚಿವ ಸಂಪುಟದ ಅನುಮೋದನೆಯೊಂದಿಗೆ ನಿಯಮಗಳನ್ನು ಸಡಿಲಗೊಳಿಸಿ ಅಂತಹ ಜಮೀನುಗಳನ್ನು ಮಂಜೂರು ಮಾಡಲು ಸರಕಾರ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News