×
Ad

ರಾಜೀವ್ ಗಾಂಧಿ ವಿವಿ ಕ್ರೀಡಾಕೂಟ : ಆಳ್ವಾಸ್ ಚಾಂಪಿಯನ್

ಆಳ್ವಾಸ್ ನಿಂದ ಎರಡು ಕೂಟ ದಾಖಲೆ

Update: 2025-11-20 23:27 IST

ಮೂಡುಬಿದಿರೆ : ಇಲ್ಲಿನ ಸ್ವರಾಜ್ ಮೈದಾನದಲ್ಲಿ ಗುರುವಾರ ಮುಕ್ತಾಯಗೊಂಡ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 23ನೇ ಅಂತರ ಕಾಲೇಜು ವಾರ್ಷಿಕ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷ ಮತ್ತು ಮಹಿಳಾ ಚಾಂಪಿಯನ್‌ಶಿಪ್ ಸಹಿತ ಎರಡು ವಿಭಾಗದ ಸಮಗ್ರ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಆತಿಥ್ಯದಲ್ಲಿ ಮೂರು ದಿನ ನಡೆದ ಕ್ರೀಡಾಕೂಟದಲ್ಲಿ ಬೆಂಗಳೂರಿನ ಗಂಗೋತ್ರಿ ನರ್ಸಿಂಗ್ ಕಾಲೇಜಿನ ಆಕಾಶ್ ಬೆನಡಿಕ್ಟ್ ಹಾಗೂ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನ ಅನುರಾಧಾ ರಾಣಿ, ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದ ವೈಯಕ್ತಿಕ ಚಾಂಪಿಯನ್ ಆಗಿ ಮೂಡಿ ಬಂದರು.

ಸಮಗ್ರ ತಂಡ ಪ್ರಶಸ್ತಿ

ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ಅಲೈಡ್ ಹೆಲ್ತ್ಸೈನ್ಸಸ್ ಕಾಲೇಜು ಕ್ರಮವಾಗಿ 48 ಹಾಗೂ 60 ಅಂಕಗಳನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಒಟ್ಟು 108 ಅಂಕಗಳೊಂದಿಗೆ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿ ಪಡೆಯಿತು.

ನೂತನ ಕೂಟ ದಾಖಲೆ: ಉದ್ದ ಜಿಗಿತದಲ್ಲಿ ಆಳ್ವಾಸ್‌ನ ಅನುರಾಧ ರಾಣಿ ನೂತನ ಕೂಟ ದಾಖಲೆ ನಿರ್ಮಿಸಿದರೆ, ಟ್ರಿಪಲ್ ಜಂಪ್‌ನಲ್ಲಿ ಆಳ್ವಾಸ್‌ನ ಸ್ವಾತಿ ಸಿಂಗ್ ನೂತನ ಕೂಟ ದಾಖಲೆ ಬರೆದರು.

ಗುರುವಾರ ಸಾಯಂಕಾಲ ನಡೆದ ಸಮಾರೋಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ.ಶಿವಶರಣ್ ಶೆಟ್ಟಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಸೆನೆಟ್ ಸದಸ್ಯ ಡಾ.ಶರಣಬಶೆಟ್ಟಿ, ಕ್ರೀಡಾಕೂಟದ ವೀಕ್ಷಕರುಗಳಾದ ಡಾ.ಅನಿಲ್ ಜೋಸೆಫ್, ಡಾ.ಜಯಕುಮಾರ್, ಆಳ್ವಾಸ್ ಟ್ರಸ್ಟಿ ಡಾ.ವಿನಯ್ ಆಳ್ವ, ನರ್ಸಿಂಗ್ ಕಾಲೇಜು ಪ್ರಾಂಶುಪಾಲ ಡಾ.ಯತಿಕುಮಾರಸ್ವಾಮಿಗೌಡ, ನ್ಯಾಚುರೋಪಥಿ ಕಾಲೇಜು ಪ್ರಾಂಶುಪಾಲೆ ಡಾ.ವನಿತಾ ಶೆಟ್ಟಿ, ಆಳ್ವಾಸ್‌ನ ದೈಹಿಕ ನಿರ್ದೇಶಕ, ಕ್ರೀಡಾಕೂಟದ ಸಂಚಾಲಕ ಅವಿನಾಶ್ ಎಸ್., ಆಯ್ಕೆ ಸಮಿತಿ ಸದಸ್ಯರಾದ ಶ್ರದ್ಧಾ ಶೆಟ್ಟಿ, ಹರೀಶ ಗೌಡ ಉಪಸ್ಥಿತರಿದ್ದರು.

ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲೆ ಡಾ.ಸುಶೀಲ ಶೆಟ್ಟಿ ವಂದಿಸಿ, ದೈಹಿಕ ನಿರ್ದೇಶಕ ಡಾ.ರಾಮಚಂದ್ರ ನಿರೂಪಿಸಿದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News