ಅಂಬ್ಲಮೊಗರು: ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ
ಉಳ್ಳಾಲ; ಅಂಬ್ಲಮೊಗರು ಗ್ರಾಮ ಪಂಚಾಯತ್ ನಲ್ಲಿ ಎರಡನೇ ಹಂತದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಶುಕ್ರವಾರ ನಡೆಯಿತು.
ಒಟ್ಟು 12 ಸ್ಥಾನ ಗಳ ಪೈಕಿ 11 ಕಾಂಗ್ರೆಸ್ ಬೆಂಬಲಿತ ಓರ್ವ ಬಿಜೆಪಿ ಸದಸ್ಯರಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಮುಹಮ್ಮದ್ ಇಕ್ಬಾಲ್ ಉಪಾಧ್ಯಕ್ಷ ಸ್ಥಾನಕ್ಕೆ ಮುಮ್ತಾಜ್ ನಾಮಪತ್ರ ಸಲ್ಲಿಸಿದ್ದು, ಪ್ರತಿಸ್ಪರ್ಧಿ ಇಲ್ಲದ ಕಾರಣ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ , ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮೀಸಲಾತಿ ಪ್ರಕಟ ಆಗಿತ್ತು.
ಅಧ್ಯಕ್ಷ ರಾಗಿ ಎಸ್ ಮುಹಮ್ಮದ್ ಇಕ್ಬಾಲ್ ಉಪಾಧ್ಯಕ್ಷ ರಾಗಿ ಮುಮ್ತಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕ್ರೀಡಾ ಇಲಾಖೆ ಉಪನಿರ್ದೇಶಕರು ರವಿನಾಯ್ಕ್ ಚುನಾವಣಾ ಅಧಿಕಾರಿ ಆಗಿ ಕಾರ್ಯ ನಿರ್ವಹಿಸಿದ್ದರು.
ಈ ಸಂದರ್ಭದಲ್ಲಿ ಪಿಡಿಒ ಅಬ್ದುಲ್ ಖಾದರ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಖಂಡರಾದ ಸುದರ್ಶನ್ ಶೆಟ್ಟಿ, ಮನ್ಸೂರ್,ಝಿಯಾದ್, ಅಂಬ್ಲಮೊಗರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಫೀಕ್ ಮತ್ತಿತರರು ಉಪಸ್ಥಿತರಿದ್ದರು.