×
Ad

ಮಿಲ್ಲತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ

Update: 2024-09-04 17:44 IST

ಮಂಗಳೂರು, ಸೆ.4: ಮಿಲ್ಲತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 34ನೇ ಸಾಲಿನ ವಾರ್ಷಿಕ ಮಹಾಸಭೆಯು ಶನಿವಾರ ನಗರದ ಸರಕಾರಿ ನೌಕರರ ಸಂಘದ ನೇತ್ರಾವತಿ ಸಭಾಭವನದಲ್ಲಿ ನಡೆಯಿತು. ಸೊಸೈಟಿಯ ಅಧ್ಯಕ್ಷ ಹಾಜಿ ಬಿ. ಇಬ್ರಾಹೀಂ ಅಧ್ಯಕ್ಷತೆ ವಹಿಸಿದ್ದರು.

ಬಜ್ಪೆ ಮಸೀದಿಯ ಖತೀಬ್ ಅಬ್ದುಲ್ ರಹ್ಮಾನ್ ಸಖಾಫಿ ದುಆಗೈದರು. ಸಭೆಯಲ್ಲಿ ಸಂಘದ ಸದಸ್ಯರಿಗೆ ಶೇ. 6 ಡಿವಿಡೆಂಡ್ ಘೋಷಿಸಲಾಯಿತು.

ಸಂಘದ ನಿರ್ದೇಶಕರಾದ ಅಬ್ದುಲ್ ಸಲಾಂ, ಅಬ್ದುಲ್ ರಝಾಕ್ ಎಂ., ಮುನೀರ್ ಅಹಮ್ಮದ್, ನಿಸಾರ್ ಫಕೀರ್ ಮುಹಮ್ಮದ್, ರತ್ನಾಕರ್ ರಾವ್, ನೂರ್ ಅಮೀನ, ಶಾಹಿದಾ, ಕೆ.ಸುದರ್ಶನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಎಂ.ಅಬ್ದುಲ್ ಅಝೀಝ್ ಕುದ್ರೋಳಿ ಸ್ವಾಗತಿಸಿದರು. ಸಂಘದ ಪ್ರಭಾರ ಕಾರ್ಯದರ್ಶಿ ಪ್ರೀತಿಕಾ ರಾಜೇಶ್ ವರದಿ ವಾಚಿಸಿದರು. ಸಂಸ್ಥೆಯ ನಿರ್ದೇಶಕ ಮುನೀರ್ ಅಹ್ಮದ್ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News