×
Ad

ಎನ್‌ಐಟಿಕೆ ಸುರತ್ಕಲ್‌ನಲ್ಲಿ ರ‍್ಯಾಗಿಂಗ್ ವಿರೋಧಿ ದಿನಾಚರಣೆ

Update: 2025-08-12 22:58 IST

ಮಂಗಳೂರು: ಎನ್‌ಐಟಿಕೆ ಸುರತ್ಕಲ್‌ನಲ್ಲಿ ಮಂಗಳವಾರ ರ‍್ಯಾಗಿಂಗ್ ವಿರೋಧಿ ದಿನವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ಮತ್ತು ಸಾಂಸ್ಥಿಕ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದ್ದರು. ರ‍್ಯಾಗಿಂಗ್ ತಡೆಗಟ್ಟುವ ನಿಟ್ಟಿನಲ್ಲಿ ಈ ಸಂದರ್ಭದಲ್ಲಿ ಪ್ರತಿಜ್ಞೆ ಕೈಗೊಳ್ಳಲಾಯಿತು.

ಎಐಟಿಕೆ ಸುರತ್ಕಲ್‌ನ ನಿರ್ದೇಶಕ ಪ್ರೊ. ಬಿ. ರವಿ ಈ ಸಂದರ್ಭದಲ್ಲಿ ಮಾತನಾಡಿ ರ್ಯಾಗಿಂಗ್ ಬಗ್ಗೆ ಎನ್‌ಐಟಿಕೆ ಶೂನ್ಯ ಸಹಿಷ್ಣುತಾ ನೀತಿಯನ್ನು ಹೊಂದಿದೆ ಎಂದು ಹೇಳಿದರು.

ರ‍್ಯಾಗಿಂಗ್ ವಿರೋಧಿ ದಿನದ ಉದ್ದೇಶವೆಂದರೆ ಪ್ರತಿಯೊಬ್ಬ ವಿದ್ಯಾರ್ಥಿಯೂ ನಮ್ಮ ಕ್ಯಾಂಪಸ್‌ನಲ್ಲಿ ಸುರಕ್ಷಿತ ಮತ್ತು ಸ್ವಾಗತಾರ್ಹ ಭಾವನೆಯನ್ನು ಇರುವಂತೆ ನೋಡಿಕೊಳ್ಳುವುದು ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಪ್ರೊ. ಗೋವಿಂದ ರಾಜ್ ಮಂಡೇಲಾ ಹೇಳಿದರು.

ಎನ್‌ಐಟಿಕೆಯಲ್ಲಿ ಆ.12 ರಿಂದ ಆಗಸ್ಟ್ 18  ರವರೆಗೆ ರ‍್ಯಾಗಿಂಗ್ ವಿರೋಧಿ ಸಪ್ತಾಹವನ್ನು ಆಚರಿಸಲಾಗವುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News