×
Ad

ಮಂಗಳೂರು: ಎಂಡಿಎಂಎ ಪ್ರಕರಣದ ಆರೋಪಿಗೆ ನಿರೀಕ್ಷಣಾ ಜಾಮೀನು

Update: 2023-07-09 15:50 IST

ಮಂಗಳೂರು, ಜು.9: ನಾಲ್ಕು ವರ್ಷಗಳ ಹಿಂದೆ ನಡೆದ ಎಂಡಿಎಂಎ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.

2019ರಲ್ಲಿ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ರಮೀಝ್ ಗಫೂರ್ ಸಯ್ಯದ್ ಯಾನೆ ರಮ್ಮಿ ಎಂಬಾತನ ವಿರುದ್ಧ ದೂರು ದಾಖಲಾಗಿತ್ತು. ಆದರೆ ಆರೋಪಿಯು ತಲೆಮರೆಸಿಕೊಂಡಿದ್ದ. ಇದೀಗ ಮಂಗಳೂರು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಆರೋಪಿಯ ಪರವಾಗಿ ವಕೀಲರಾದ ಇಸ್ಮಾಯೀಲ್ ಎಸ್., ಅಬೂಬಕರ್ ಸಿದ್ದೀಕ್ ಎಂ.ಪಿ. ವಾದಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News