×
Ad

ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್‌ಗೆ ನೇಮಕ

Update: 2023-07-25 21:59 IST

ಸತೀಶ್ - ನಾಗೇಶ್

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರನ್ನಾಗಿ ಸತೀಶ್ ಬಂಗೇರ ಕಾಶಿಪಟ್ನ ಹಾಗೂ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರನ್ನಾಗಿ ಕೆ.ಎಂ.ನಾಗೇಶ್ ಕುಮಾರ್ ಗೌಡ ಅವರನ್ನು ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಸತೀಶ್ ಬಂಗೇರ ಅವರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಪೆರಾಡಿ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ, ಮಾಸ್ ಪ್ರೈ.ಲಿ. ಅಡಿಕೆ ಬೆಳೆಗಾರರ ಸಂಘದ ನಿರ್ದೇಶಕರಾಗಿ, ಕಾಶಿಪಟ್ನ ಗ್ರಾಪಂ ಉಪಾಧ್ಯಕ್ಷರಾಗಿದ್ದಾರೆ.

ನಾಗೇಶ್ ಕುಮಾರ್ ಗೌಡ ಅವರು ಲ್ಯಾಲ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ (ಲಿ.) ಅಧ್ಯಕ್ಷರಾಗಿ, ಶ್ರೀಸ್ವಾಮಿ ಪ್ರಸಾದ್ ಅಶೋಸಿಯೇಟ್ಸ್‌ನ ಅಧ್ಯಕ್ಷರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News