×
Ad

ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಅರುಣ್‌ ಕುಮಾರ್ ಶೆಟ್ಟಿ ಆಯ್ಕೆ

Update: 2024-03-11 16:49 IST

ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ವಾಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯ ಅರುಣ್ ಕುಮಾರ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ಜಿಲ್ಲೆಯ ವಿವಿಧ ತಾಲೂಕುಗಳ ಅಧ್ಯಕ್ಷರ ನೇಮಕಾತಿ ಆದೇಶ ಪ್ರಕಟವಾಗಿದ್ದು, ನೂತನವಾಗಿ ಅಸ್ತಿತ್ವಕ್ಕೆ ಬಂದ ಈ ಸಮಿತಿಯ ಪ್ರಪ್ರಥಮ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ವಾಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ತನ್ನ ಸಾಮಾಜಿಕ ಸೇವೆಯ ಮೂಲಕ ಗಮನಸೆಳೆದಿರುವ ಅರುಣ್ ಅವರಿಗೆ ಸೂಕ್ತ ಸ್ಥಾನಮಾನ ದೊರೆತಿದ್ದು ಅವರ ಅಭಿಮಾನಿ ವರ್ಗಕ್ಕೆ ಸಂತಸ ತಂದಿದೆ.

ಸದಸ್ಯತ್ವ ನೋಂದಾವಣೆಯಲ್ಲಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸುವ ಮೂಲಕ ಅರುಣ್ ಶೆಟ್ಟಿ ಜಿಲ್ಲೆಯ ನಾಯಕರ ಗಮನ ಸೆಳೆದಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News