×
Ad

ಹಲ್ಲೆ, ಕೊಲೆ ಬೆದರಿಕೆ ಪ್ರಕರಣ: ಹಳೆ ಆರೋಪಿ ಸೆರೆ

Update: 2024-09-04 21:58 IST

ಮೂಡುಬಿದಿರೆ: ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣದಲ್ಲಿ ಆರೋಪಿಯಾಗಿ ಕಳೆದ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯೋರ್ವನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಪೆರ್ಣೆ ಗ್ರಾಮದ ಹೆಮ್ಮುಂಡೆ ರಸ್ತೆಯ ಶಂಕರ ಆಚಾರಿ (58) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸುವಂತೆ ನ್ಯಾಯಾಲಯವು ಮೂಡುಬಿದಿರೆ ಪೊಲೀಸರಿಗೆ ವಾರಂಟ್‌ ಜಾರಿಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯ ಕಾರ್ಕಳದಲ್ಲಿ ಇರುವುದನ್ನು ಪತ್ತೆಹಚ್ಚಿದ ಮೂಡಬಿದಿರೆ ಪೊಲೀಸ್‌ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಅವರ ನೇತೃತ್ವದ ಪೊಲೀಸ್‌ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಆರೋಪಿಯ ಬಂಧನ ಕಾರ್ಯಾಚರಣೆಯಲ್ಲಿ ಮೂಡಬಿದಿರೆ ಪಿಎಸ್ಸೈ ಕೃಷ್ಣಪ್ಪ, ಸಿಬ್ಬಂದಿಗಳಾದ ರಾಜೇಶ, ಸುರೇಶ ಮತ್ತು ನಾಗರಾಜ್ ಅವರು ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News