×
Ad

ವಿಟ್ಲ: ಮಹಿಳೆಗೆ ಚಾಕು ತೋರಿಸಿ ಚಿನ್ನ ಲಪಟಾಯಿಸಲು ಯತ್ನ; ದೂರು ದಾಖಲು

Update: 2023-11-25 18:13 IST

ವಿಟ್ಲ:  ಮಹಿಳೆಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಲಪಟಾಯಿಸಲು ಯತ್ನಿಸಿದ ಘಟನೆ ಕುಳ ಗ್ರಾಮದ ನೀರಪಳಿಕೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ನೀರಪಳಿಕೆ ಮಹಮ್ಮದ್ ಕುಂಞಿ ಎಂಬವರ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆ ತೆರಳಿದ್ದಾಗ ಮನೆಯಲ್ಲಿ ವೃದ್ಧ ಮಹಿಳೆ ಒಬ್ಬರು ಮಾತ್ರ ಇರುವ ಸಂದರ್ಭ ಮನೆಯ ಮುಖ್ಯ ದ್ವಾರದ ಮೂಲಕ ವ್ಯಕ್ತಿಯೋರ್ವ ಮುಖಕ್ಕೆ ಕವಚ (ಮಾಸ್ಕ್) ಹಾಕಿ ಒಳ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿ ಮಹಿಳೆಯ ಹತ್ತಿರ ಚಾಕುನೊಂದಿಗೆ ಬಂದು ಕಿವಿಯಲ್ಲಿ ಇರುವ ಚಿನ್ನ ಕೊಡುವಂತೆ ಕೇಳಿದ್ದಾನೆ. ಬೆದರಿದ ಮಹಿಳೆ ಹಿಂದಿನ ಬಾಗಿಲು ಮೂಲಕ ಹತ್ತಿರದ ಮನೆಯವರನ್ನು ಕೂಗಿ ಕರೆದಾಗ ಆತ ಹಿಂಬದಿಯ ತೋಟದ ದಾರಿಯಾಗಿ ಪರಾರಿಯಾದ್ದಾನೆ. 112 ಗೆ ಕರೆಮಾಡಿ ಮಾಹಿತಿ ನೀಡಿದ್ದಾಗ ತುರ್ತು ಕಾರ್ಯಪಡೆಯ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದರು. ಬಳಿಕ ವಿಟ್ಲ ಠಾಣೆಗೆ ಮಾಹಿತಿ ನೀಡಲಾಯಿತು. ವಿಟ್ಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News